ಶಾಸಕಿ ಅನಿತಾ ಕುಮಾರಸ್ವಾಮಿಗೆ ಹೋಂ ಕ್ವಾರಂಟೈನ್ ಆಗಲು ಸಲಹೆ ನೀಡಿದ ವೈದ್ಯರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಅವರು ಹಿನ್ನೆಲೆ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಅವರ ಪತ್ನಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರು ಮುಂದಿನ ಸೂಚನೆ ನೀಡುವವರೆಗೂ ಶಾಸಕರು ಹೋಂ ಕ್ವಾರಂಟೈನ್ ನಲ್ಲೇ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕೊರೊನಾ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಜೆಪಿ ನಗರದ ಗೃಹಕಚೇರಿ ಬಳಿ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರು ಸಹಕರಿಸಬೇಕೆಂದು ಅನಿತಾ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ. ರಾಮನಗರ ರಕ್ಷಿಸಿ ಇಲ್ಲದಿದ್ದರೆ ಬೀದಿಗಿಳಿಯುವೆ: ಶಾಸಕಿ ಅನಿತಾ ಕುಮಾರಸ್ವಾಮಿ ಎಚ್ಚರಿಕೆ! ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವ ಕುರಿತಾಗಿ ಅವರೇ ಟ್ವೀಟ್ ಮಾಡಿದ್ದು, ಕೋವಿಡ್ ಸೋಂಕು ಬಂದಿರುವುದು ದೃಢಪಡಿಸಿದ್ದಾರೆ. ಕೋವಿಡ್ ಪಾಸಿಟಿವ್ ಆದ ಎಚ್‌ಡಿಕೆಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ! ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಮನವಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಪ್ರಸ್ತುತ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ.