National News Analysis

15 September 2024, 8:36 AM

BSNL NEW plan of prepare custamer

BSNLನಿಂದ ಮತ್ತೆ ಹೊಸದೊಂದು ಪ್ಲ್ಯಾನ್ ಬಿಡುಗಡೆ; 395 ದಿನ ವ್ಯಾಲಿಡಿಟಿ! By Manthesh Published: Tuesday, September 1, 2020, 9:20 [IST] ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಸಂಸ್ಥೆಯು ಟೆಲಿಕಾಂ ಕ್ಷೇತ್ರದಲ್ಲಿ ತನ್ನ ಜನಪ್ರಿಯತೆ ಉಳಿಸಿಕೊಳ್ಳಲು ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಅವುಗಳಲ್ಲಿ ಕೆಲವು ಯೋಜನೆಗಳು ಪ್ರತಿದಿನ ಡೇಟಾ ಪ್ರಯೋಜನದ ಹಾಗೂ ಅಧಿಕ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿವೆ. ಈ ದಿಸೆಯಲ್ಲಿ ಮುಂದುವರೆದಿರುವ ಸಂಸ್ಥೆಯು ಈಗ ಹೊಸದಾಗಿ ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ ಅನ್ನು ಅನಾವರಣ ಮಾಡಿ ಗ್ರಾಹಕರನ್ನು ಸೆಳೆದಿದೆ. ಹೌದು, ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಸಂಸ್ಥೆಯು ಹೊಸದಾಗಿ PV-1499ರೂ.ಗಳ ಪ್ರೀಪೇಡ್‌ ಪ್ಲ್ಯಾನ್‌ ಅನ್ನು ಗ್ರಾಹಕರಿಗೆ ಪರಿಚಯಿಸಿದೆ. ಈ ಯೋಜನೆಯು ಒಂದು ವರ್ಷದ (365 ಡೇಸ್ಸ್) ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಆರಂಭಿಕ ಕೊಡುಗೆಯಾಗಿ ಹೆಚ್ಚುವರಿ ವ್ಯಾಲಿಡಿಟಿ ಲಭ್ಯವಾಗಲಿದೆ. ಈ ಯೋಜನೆಯ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿರಿ. ವಾರ್ಷಿಕ ವ್ಯಾಲಿಡಿಟಿ ಬಿಎಸ್‌ಎನ್‌ಎಲ್‌ ಸಂಸ್ಥೆಯ PV-1499ರೂ.ಗಳ ರೀಚಾರ್ಜ್‌ ಮಾಡಿಸಿಕೊಳ್ಳುವ ಗ್ರಾಹಕರು ಒಂದು ವರ್ಷದ ಅವಧಿಯ ವ್ಯಾಲಿಡಿಟಿ ಪಡೆಯಲಿದ್ದಾರೆ. ಆರಂಭಿಕ ಹಂತದಲ್ಲಿ ಪ್ರಮೋಷನಲ್ ಕೊಡುಗೆಯಾಗಿ 30 ದಿನ ಹೆಚ್ಚುವರಿ ವ್ಯಾಲಿಡಿಟಿ ಸಿಗಲಿದೆ. ಹೀಗಾಗಿ ಗ್ರಾಹಕರಿಗೆ ಒಟ್ಟಾರೆ 395 ದಿನಗಳ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯ ಲಭ್ಯವಾಗಲಿದೆ.

Vinkmag ad

Read Previous

JGU Commences Academic Year 2020-21 with50% Increase in AdmissionsFully Online Classes with Latest Technology PlatformsTo Begin on 1st September

Read Next

PM addresses inaugural session of Governors’ Conference on National Education Policy

Leave a Reply

Your email address will not be published. Required fields are marked *

13 + 3 =

Most Popular